ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 31 ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಿದ ಪೊಲೀಸರು, ಗಡಿಪಾರು ಪ್ರಕ್ರಿಯೆಗಾಗಿ ಪಶ್ಚಿಮ ಬಂಗಾಳದ ಮಾಲ್ಡಾ ಕೇಂದ್ರಕ್ಕೆ ರವಾನಿಸಿದ್ದಾರೆ.
ನಕಲಿ ಆಧಾರ್, ಪಡಿತರ ಚೀಟಿಗಳೊಂದಿಗೆ ನೆಲೆಸಿದ್ದ ಇವರು, ಕಾರ್ಖಾನೆ-ಕಟ್ಟಡ ಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿದ್ದರು. ದಾಖಲೆ ಸೃಷ್ಟಿಸಿದ ಜಾಲದ ಬಗ್ಗೆಯೂ ತನಿಖೆ ನಡೆಯುತ್ತಿದೆ.
ನಗರದ ವಿವಿಧೆಡೆ ಇಂತಹ ಕಾರ್ಯಾಚರಣೆ ಮುಂದುವರಿಯಲಿದ್ದು, ಮನೆ ಮಾಲೀಕರು ಬಾಡಿಗೆದಾರರ ದಾಖಲೆ ಪರಿಶೀಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಗಡಿಪಾರು ಪ್ರಕ್ರಿಯೆ ವಿದೇಶಿಗರ ಕಾಯ್ದೆಯನ್ವಯ ನಡೆಯುತ್ತಿದ್ದು, ಕೇಂದ್ರ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ.
